ಬಡ ವಿದ್ಯಾರ್ಥಿಗಳ ಆಶಾಕಿರಣ: ಶಂಸುಲ್ ಉಲಮಾ ಕಾಲೇಜಿನಲ್ಲಿ ಶೇ75% ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಬಡ ವಿದ್ಯಾರ್ಥಿಗಳ ಆಶಾಕಿರಣ:  ಶಂಸುಲ್ ಉಲಮಾ ಕಾಲೇಜಿನಲ್ಲಿ  ಶೇ75% ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
ಬಡ ವಿದ್ಯಾರ್ಥಿಗಳ ಆಶಾಕಿರಣ:  ಶಂಸುಲ್ ಉಲಮಾ ಕಾಲೇಜಿನಲ್ಲಿ  ಶೇ75% ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
ಬಡ ವಿದ್ಯಾರ್ಥಿಗಳ ಆಶಾಕಿರಣ:  ಶಂಸುಲ್ ಉಲಮಾ ಕಾಲೇಜಿನಲ್ಲಿ  ಶೇ75% ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ವಿರಾಜಪೇಟೆ :- ಶಿಕ್ಷಣದೊಂದಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಕನಸು ಕಂಡಿರುವ ಬಡ, ನಿರ್ಗತಿಕ, ಆರ್ಥಿಕ ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳು ಪರೀಕ್ಷೆಯಲ್ಲಿ ಸಾಧನೆ ಮಾಡಿದರೂ ಕುಟುಂಬದ ಆರ್ಥಿಕ ಸಂಕಷ್ಟದಿಂದ ಅದೆಷ್ಟೀ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ.ಪೋಷಕರು ಹಾಗೂ ವಿದ್ಯಾರ್ಥಿಗಳ ಕನಸನ್ನು ನನಸು ಮಾಡಲು ವಿರಾಜಪೇಟೆ ತಾಲೂಕಿನ ಪೆರುಂಬಾಡಿಯ ಶಂಸುಲ್ ಉಲಮ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣದ ಸುವರ್ಣ ಅವಕಾಶವನ್ನು ನೀಡಿದ್ದು,ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 75% ರಷ್ಟು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪಿ.ಯು.ಸಿ, ಪದವಿ ಶಿಕ್ಷಣ ಪ್ರವೇಶಾತಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಶಿಕ್ಷಣ ನೀಡಲು ಆಡಳಿತ ಮಂಡಳಿ ಮುಂದಾಗಿದ್ದು, ಶಂಸುಲ್ ಉಲಮ ಶಿಕ್ಷಣ ಸಂಸ್ಥೆಯ ಶಿಕ್ಷಣ ಕಾಳಜಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶಂಸುಲ್ ಉಲಮಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಭಾನುಮತಿ ಮಾತನಾಡಿ,ಪೆರುಂಬಾಡಿಯಲ್ಲಿರುವ ಶಂಸುಲ್ ಉಲಮ ಎಜುಕೇಶನಲ್ ಅಕಾಡೆಮಿ ಕಳೆದ 13 ವರ್ಷಗಳಿಂದ ಬಡ ಅನಾಥ ನಿರ್ಗತಿಕ ಹೆಣ್ಣು ಮಕ್ಕಳ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಮುಂದಾಗಿದ್ದು, ಇದರೊಂದಿಗೆ ಕಾಲೇಜು ಪ್ರಾರಂಭಿಸಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಕಳೆದ ಹಲವು ವರ್ಷಗಳಿಂದಲೂ ಪರೀಕ್ಷೆಯಲ್ಲಿ ಶೇ 100ರಷ್ಟು ಸಾಧನೆ ಮಾಡುವುದರೊಂದಿಗೆ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡೆ ಸೇರಿದಂತೆ ಇತರ ಕಾರ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ರಾಜ್ಯ, ಅಂತರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.ಗುಣಮಟ್ಟದ ಶಿಕ್ಷಣ ಕಲಿಕೆಗೆ ಪೂರಕವಾದ ವಾತಾವರಣವಿದ್ದು ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.ಈ ಬಾರಿಯ ಪರೀಕ್ಷೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ 75 ರಷ್ಟು ಅಂಕ ಗಳಿಸಿದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಸಂಸ್ಥೆ ಮುಂದಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು. 

  ಶಂಸುಲ್ ಉಲಮ ಎಜುಕೇಶನಲ್ ಅಕಾಡೆಮಿ ಅಧ್ಯಕ್ಷ ಸಿ.ಪಿ.ಎಂ ಬಸೀರ್ ಹಾಜಿ ಮಾತನಾಡಿ ಕಳೆದ 13 ವರ್ಷಗಳಿಂದ ಬಡ ಅನಾಥ ನಿರ್ಗತಿಕ ಹೆಣ್ಣು ಮಕ್ಕಳ ಕೇಂದ್ರವನ್ನ ಪ್ರಾರಂಭಿಸಿ ನೂರಾರು ಮಕ್ಕಳಿಗೆ ಉಚಿತ ಶಿಕ್ಷಣದೊಂದಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.ಇದರೊಂದಿಗೆ LKGಯಿಂದ ಡಿಗ್ರಿ ಕಾಲೇಜ್ ವರಗೆ 400 ಕ್ಕೆ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಕಲಿಯುತ್ತಿದ್ದು ಗ್ರಾಮೀಣ ಭಾಗದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 75ರಷ್ಟು ಅಂಕಗಳಿಸಿದ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಪ್ರಸಕ್ತ ಸಾಲಿನಲ್ಲಿ ಉಚಿತ ಶಿಕ್ಷಣ ನೀಡಲು ಮುಂದಾಗಿದ್ದೇವೆ.

ವಿದ್ಯಾರ್ಥಿಗಳು ಶಿಕ್ಷಣದ ಭವಿಷ್ಯವನ್ನು ರೂಪಿಸಿಕೊಂಡು ಉನ್ನತ ಹುದ್ದೆಯೊಂದಿಗೆ ಪ್ರತಿಭಾನ್ವಿತರಾಗಿ ಮುನ್ನಡೆಯಬೇಕಾಗಿದೆ ಎಂದು ಹೇಳಿದ ಅವರುವಿ ದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಈ ಸಂದರ್ಭ ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರುಗಳು ಹಾಜರಿದ್ದರು.