ಬಾಳುಗೋಡು: ಏಕಲವ್ಯ ಮಾದರಿ ವಸತಿ ಶಾಲೆ/ ಕಾಲೇಜಿನ 2025-26ನೇ ಸಾಲಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ವಿರಾಜಪೇಟೆ: ಬಾಳುಗೋಡುವಿನಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆ/ ಕಾಲೇಜಿನ (ಆಂಗ್ಲ ಮಾಧ್ಯಮ)2025-26 ನೇ ಸಾಲಿಗೆ ಪ್ರಥಮ ಪಿಯುಸಿ (ವಿಜ್ಞಾನ ಮತ್ತು ವಾಣಿಜ್ಯ ಶಾಸ್ತ್ರ) ಪ್ರವೇಶಾತಿಗಾಗಿ ಮತ್ತು 7 ನೇ ತರಗತಿಯಿಂದ 9 ನೇ ತರಗತಿಯವರೆಗೆ ಪರಿಶಿಷ್ಠ ಪಂಗಡ (ಎಸ್.ಟಿ) ವಿದ್ಯಾರ್ಥಿಗಳಿಂದ ನೇರ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 7-9 ನೇ ತರಗತಿವರೆಗಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, ಶಾಲಾ ಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. 7 ತರಗತಿಗೆ 22 ವಿದ್ಯಾರ್ಥಿಗಳು, 8 ನೇ ತರಗತಿಗೆ 8 ವಿದ್ಯಾರ್ಥಿಗಳು, 9 ನೇ ತರಗತಿಗೆ 05 ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ.
ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ, ಊಟ, ಪುಸ್ತಕ, ಸಮವಸ್ತ್ರ ಎಲ್ಲವನ್ನು ಉಚಿತವಾಗಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9828472732 ಸಂಖ್ಯೆಯನ್ನು ಸಂಪರ್ಕಿಸುವಂತೆ ಮತ್ತು ಪ್ರವೇಶಕ್ಕಾಗಿ ಶಾಲಾ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
