ಬಾಳೆಕುಟ್ಟಿರ ಕೇರ್ ಬಲಿ ನಮ್ಮೆ: ವಿಶೇಷ ಅತಿಥಿಯಾಗಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬಾಳೆಕುಟ್ಟಿರ ಕೇರ್ ಬಲಿ ನಮ್ಮೆ: ವಿಶೇಷ ಅತಿಥಿಯಾಗಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ತಾಲೂಕಿನ ಅರಮೇರಿಯಲ್ಲಿ, ಬಾಳೆಕುಟ್ಟಿರ ಕುಟುಂಬಸ್ಥರು ಆಯೋಜಿಸಿರುವ ಕ್ರೀಡಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ವಿಶೇಷ ಆಹ್ವಾನಿತ ಅತಿಥಿಯಾಗಿ ಭಾಗವಹಿಸಿದರು.  ಬಳಿಕ ಮಾತನಾಡಿದ ಮಾನ್ಯ ಶಾಸಕರು, ಕೊಡಗು ಜಿಲ್ಲೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿದ್ದು, ಅದರಲ್ಲಿ ಕ್ರೀಡೆಯೂ ಪ್ರಮುಖವಾಗಿದೆ.  

ಈ ಬೇಸಿಗೆ ಕಾಲವು ಕೊಡಗಿನಾದ್ಯಂತ ಕ್ರೀಡಾ ಪರ್ವವಾಗಿದ್ದು, ಇಂತಹ ಕ್ರೀಡಾಕೂಟಗಳು ನಾಡಿನ ಒಗ್ಗಟ್ಟಿಗೆ ಹಾಗೂ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು. ಕ್ರೀಡೆಯು ಕೇವಲ ದೈಹಿಕವಾಗಿ ಮಾತ್ರ ಅಲ್ಲ ಮಾನಸಿಕವಾಗಿಯೂ ಸದೃಢವಾಗಲು ಸಹಕಾರಿಯಾಗಿದ್ದು, ಎಲ್ಲರೂ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ನಾಡಿನ ಒಗ್ಗಟ್ಟಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಬಳಿಕ ಆಯೋಜಕರು ನೀಡಿದ ಸನ್ಮಾನವನ್ನು ಸ್ವೀಕರಿಸಿದ ಮಾನ್ಯ ಶಾಸಕರು ಎಲ್ಲರಿಗೂ ಶುಭ ಕೋರಿದರು.  ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು,ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖರು ಇದ್ದರು.