ಬಿಟ್ಟಂಗಾಲ:ಮೃತಪಟ್ಟ ದಯಾನಂದ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಶಾಸಕ ಎ.ಎಸ್ ಪೊನ್ನಣ್ಣ

ಬಿಟ್ಟಂಗಾಲ:ಮೃತಪಟ್ಟ ದಯಾನಂದ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ತಾಲೂಕಿನ, ಬಿಟ್ಟಂಗಾಲದ ಪೆಗ್ಗಿರಿಕಾಡು ಎಂಬಲ್ಲಿ, ಇತ್ತೀಚೆಗೆ ಸಾಕಿದ ಹಸು ದಾಳಿಯಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದ ದಯಾನಂದರವರ ಮನೆಗೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು.     ಶಾಸಕರೊಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಶಬೀರ್ ಇದ್ದರು.