ಬೆಂಗಳೂರಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಡಾ ಮಂತರ್ ಗೌಡ
ಮಡಿಕೇರಿ:ಬೆಂಗಳೂರಿನ ಶಾಸಕರ ಭವನದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಕ್ಷೇತ್ರದ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲುಗಳನ್ನು ಸ್ವೀಕರಿಸಿದರು.ಶುಕ್ರವಾರ ದಿನ ಬೆಂಗಳೂರಿನಲ್ಲಿ ತಮ್ಮ ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.ಕಾರ್ಯನಿಮಿತ್ತ ಬೆಂಗಳೂರಿನಲ್ಲಿ ಇದ್ದರು ಕೂಡ,ಶಾಸಕರಾದ ಡಾ ಮಂತರ್ ಗೌಡ ಅವರು,ತಮ್ಮ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿರುವುದು ಶ್ಲಾಘನೀಯ ವಿಷಯ.