ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು, ಕಾಲ್ತುಳಿತ,ಹೃದಯಾಘಾತದಿಂದ ಓರ್ವ ಮೃತ್ಯು!

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು, ಕಾಲ್ತುಳಿತ,ಹೃದಯಾಘಾತದಿಂದ ಓರ್ವ ಮೃತ್ಯು!

ಬೆಂಗಳೂರು: 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಇಂದು ಆರ್ಸಿಬಿ ವಿಜಯೋತ್ಸವ ನಡೆಯಲಿದ್ದು, ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಟ್ರೋಫಿ ಗೆದ್ದ ತಂಡವನ್ನು 

ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ. ಈ ವೇಳೆ ಬಾಲಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೇ ಘಟನೆಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ‌

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ  20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.