ಭಾಗಮಂಡಲ: ತಾವೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಭಾಗಮಂಡಲ:ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮಡಿಕೇರಿ ತಾಲೂಕು ಭಾಗಮಂಡಲದ ಹೋಬಳಿಯ ತಾವೂರು ಗ್ರಾಮದಲ್ಲಿ, ನೂತನವಾಗಿ ನಿರ್ಮಿಸಿದ ತಾವೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಉದ್ಘಾಟನೆಯನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಲ್ಲಿ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ, ಸಕಲ ಸವಲತ್ತುಗಳನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಕೋಳಿಬೈಲು ವೆಂಕಟೇಶ್,ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ಗ್ಯಾರಂಟಿ ಅನುಷ್ಠಾನದ ಉಪಾಧ್ಯಕ್ಷರಾದ ಗಿರೀಶ್, ರಮಾನಾಥ್ ಬೇಕಲ್,ಹರ್ಷ,ಪ್ರಕಾಶ್, ಪಕ್ಷದ ಮುಖಂಡರು,ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
What's Your Reaction?






