ಭಾಗಮಂಡಲ:70 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ರಸ್ತೆಗಳ ಉದ್ಘಾಟನೆ ನೆರವೇರಿಸಿದ ಎ.ಎಸ್ ಪೊನ್ನಣ್ಣ

ಭಾಗಮಂಡಲ: ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 70 ಲಕ್ಷಗಳ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನು, ಭಾಗಮಂಡಲ ಭಾಗಕ್ಕೆ ಪ್ರವಾಸ ಕೈಗೊಂಡಿದ್ದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು, ತಮ್ಮ ₹ 70 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವಿಧ ರಸ್ತೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೆರವೇರಿಸಿದರು.ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ತಾವೂರು ಹೈಸ್ಕೂಲ್ ಪೈಸಾರಿ ರಸ್ತೆ, ತಣ್ಣಿಮಾನಿ, ಚೇರಂಗಾಲ, ಕೋರಂಗಲ ಹಾಗೂ ಭಾಗಮಂಡಲ ಪಟ್ಟಣ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದಲ್ಲಿ ನೂತನವಾಗಿ ಹಲವು ರಸ್ತೆಗಳು ನಿರ್ಮಾಣಗೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಉದ್ಘಾಟನೆ ಬಳಿಕ ಶಾಸಕರು ಕರೆ ನೀಡಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಕೋಳಿಬೈಲು ವೆಂಕಟೇಶ್,ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ಗ್ಯಾರಂಟಿ ಅನುಷ್ಠಾನದ ಉಪಾಧ್ಯಕ್ಷರಾದ ಗಿರೀಶ್, ರಮಾನಾಥ್ ಬೇಕಲ್,ಹರ್ಷ,ಪ್ರಕಾಶ್, ಪಕ್ಷದ ಮುಖಂಡರು,ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.