ಭಾಗಮಂಡಲ:ಕಾಳಜಿ ಕೇಂದ್ರಕ್ಕೆ ಉಪವಿಭಾಗಾಧಿಕಾರಿ ಭೇಟಿ

ಭಾಗಮಂಡಲ: ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರ್ವಾಡೆ, ಭಾಗಮಂಡಲ ಹೋಬಳಿಯ ಪ್ರವಾಹ ಪೀಡಿತ, ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು. ಹಾಗೂ ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಯನ್ನು ಪರಿಶೀಲಿಸಿದರು. ಮಳೆಗಾಲದಲ್ಲಿ ಮುಂಜಾಗೃತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಗ್ರಾಮದ ಬಾಲಕರ ಭವನ ಭಾಗಮಂಡಲ ಗ್ರಾಮದ ಐಟಿಐ ಕಾಲೇಜು ಹಾಗೂ ಭಾಗಮಂಡಲ ಗ್ರಾಮದ ಕಾಶಿ ಮಠ ದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಹಾಜರಿದ್ದರು.