ಭಾರಿ ಮಳೆಗೆ ಕಕ್ಕಬ್ಬೆ ಬಳಿಯ ಕುಂಜಿಲ ಗ್ರಾಮದಲ್ಲಿ ಮನೆ ಗೋಡೆ ಕುಸಿತ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಹೋಬಳಿ ಕಕ್ಕಬ್ಬೆ- ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಕುಂಜಿಲ ಗ್ರಾಮದ ನಿವಾಸಿ ಕೆ.ಎಂ ಮರಿಯಮ್ಮ ಎಂಬುವವರ ವಾಸದ ಮನೆಯ ಗೋಡೆಯು ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕುಸಿದಿದ್ದು ಅಪಾರ ನಷ್ಟ ಸಂಭವಿಸಿದೆ.ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗೆ ಶರ್ಮಿಳ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
What's Your Reaction?






