ಮಡಿಕೇರಿ: ನಾಳೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವಾರ್ಷಿಕೋತ್ಸವ

ಮಡಿಕೇರಿ :ಮಂಗಳೂರು ಹಾಗೂ ಕೊಡಗು ವಿಶ್ಯವಿದ್ಯಾಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ 2024-25ನೇ ಸಾಲಿನ ಕಾಲೇಜು ವಾರ್ಷಿಕೋತ್ಸವವು ಮೇ, 20 ರಂದು ಬೆಳಗ್ಗೆ 10.30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ವಿಶ್ವವಿದ್ಯಾಲಯ ಗೌರವಾನ್ವಿತ ಕುಲಪತಿ ಅಶೋಕ ಸಂಗಪ್ಪ ಆಲೂರ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಎಂ.ಸುರೇಶ, ಫಿ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ರಾಘವ ಡಿ., ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜ್ಜಿರ ಬಿ.ಅಯ್ಯಪ್ಪ, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಜಯಂತಿ ರೈ, ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪ್ರೊ.ಶ್ರೀಧರ ಹೆಗಡೆ ಇತರರು ಪಾಲ್ಗೊಳ್ಳಲಿದ್ದಾರೆ.