ಮಡಿಕೇರಿ: ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ಮಡಿಕೇರಿ: ಮೈಕ್ರೋ ಫೈನಾನ್ಸ್ ಕಿರುಕುಳ:  ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ಮಡಿಕೇರಿ: ನಗರದ ಮಹಿಳಾ ಸಮಾಜದ ದಾಸ್ತಾನಿನಲ್ಲಿ ಡೆತ್ ನೋಟ್ ಬರೆದಿಟ್ಟು ದೇವಜನ ಜಗದೀಶ್(56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ನವರ ಹಾವಳಿಯಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟಿನಲ್ಲಿ ಬರೆಯಲಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.