ಮಡಿಕೇರಿಗೆ ಮತ್ತೊಂದು ಇಂದಿರಾ ಕ್ಯಾಂಟೀನ್ ಭಾಗ್ಯ: ಮೇ 21 ರಂದು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಮಡಿಕೇರಿ;ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ಮೇ, 21 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ನಗರಾಭಿವೃದ್ಧಿ ಸಚಿವರು ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯರಾದ ಬಿ.ವೈ.ರಾಜೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಮಂದ್ರಿರ ಮೋಹನದ್ ದಾಸ್, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್, ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಇತರರು ಪಾಲ್ಗೊಳ್ಳಲಿದ್ದಾರೆ.