ಮಳೆಯ ಆರ್ಭಟ:ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗೆ ಶಾಸಕ ಮಂತರ್ ಗೌಡ ಸೂಚನೆ
ಕುಶಾಲನಗರ: ತಾಲೂಕಿನ ವಾಲ್ನೂರು ತ್ಯಾಗತ್ತೂರಿನ ಅತ್ತಿ ಮಂಗಲ ಜಂಕ್ಷನ್ ನಲ್ಲಿ ರಸ್ತೆಗೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾದ ಹಿನ್ನೆಲೆಯಲ್ಲಿ ಶಾಸಕ ಡಾ.ಮಂತರ್ ಗೌಡ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ಜಿಲ್ಲಾಧಿಕಾರಿ ವೆಂಕಟ್ ರಾಜಾ ರವರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಸೂಚನೆ ನೀಡಿದರು.ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್ ಇದ್ದರು.
