ಮಳೆಯ ಆರ್ಭಟ:ತ್ಯಾಗತ್ತೂರಿನಲ್ಲಿ ಮನೆಯ ಮೇಲೆ ಬಿದ್ದ ಮರ!

ಮಡಿಕೇರಿ:ವಾಲ್ನೂರು- ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಗತ್ತೂರಿನ ಮಸೀದಿ ಪಕ್ಕದ ಬೀರನ್ ಅವರ ಮನೆಯ ಮೇಲೆ ಮರ ಬಿದ್ದು ಕುಟುಂಬಸ್ಥರು ಪ್ರಾಣಾಪಾಯದಿಂದ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಸ್ಥಳಕ್ಕೆ ತಹಶಿಲ್ದಾರರಾದ ಕಿರಣ್ ಗೌರಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.