ಮುಖ್ಯಮಂತ್ರಿಗಳೊಂದಿಗೆ ದೆಹಲಿ ಪ್ರವಾಸದಲ್ಲಿ ಎ.ಎಸ್ ಪೊನ್ನಣ್ಣ; ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಭೇಟಿಯಾದ ಎ.ಎಸ್ ಪೊನ್ನಣ್ಣ

ಮುಖ್ಯಮಂತ್ರಿಗಳೊಂದಿಗೆ ದೆಹಲಿ ಪ್ರವಾಸದಲ್ಲಿ ಎ.ಎಸ್ ಪೊನ್ನಣ್ಣ;  ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಭೇಟಿಯಾದ ಎ.ಎಸ್ ಪೊನ್ನಣ್ಣ

ಮಡಿಕೇರಿ:ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರವರನ್ನು ಭೇಟಿಯಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಜೇವರ್ಗಿ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್, ಬಾಲ ಭವನ ಸೊಸೈಟಿ ಅಧ್ಯಕ್ಷರಾದ ಬಿ.ಆರ್ ನಾಯ್ಡು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.