ಮೇ,02 ರಂದು ಆದೇಶ ಪತ್ರ ವಿತರಣಾ ಸಮಾರಂಭ

ಮಡಿಕೇರಿ;-ರಾಜೀವ್ ಗಾಂಧಿ ವಸತಿ ನಿಗಮ, ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ (ಹೆಚ್ಚುವರಿ)ಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಮಗಾರಿ ಆದೇಶ ಪತ್ರ ವಿತರಿಸುವ ಸಮಾರಂಭವು ಮೇ, 02 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ.ಇಒ ಶೇಖರ್ ಅವರು ತಿಳಿಸಿದ್ದಾರೆ.