ಮೇ19 ರಂದು ವಿರಾಜಪೇಟೆ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ!

ಮಡಿಕೇರಿ:-ವಿರಾಜಪೇಟೆ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಅಮ್ಮತ್ತಿ ಹಾಗೂ ಎಫ್9 ಚೆಂಬೆಬೆಳ್ಳೂರು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಪೂರ್ವ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಅಮ್ಮತ್ತಿ, ಕಾರ್ಮಾಡು, ಬಿಳುಗುಂದ, ಕೊಂಡಂಗೇರಿ, ಹಾಲುಗುಂದ, ಕಣ್ಣಂಗಾಲ, ಒಂಟಿಯಂಗಡಿ, ಚೆಂಬೆಬೆಳ್ಳೂರು, ದೇವಣಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.