ಮೇಕೇರಿ: ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ಮಂಗಳವಾರ ಸುರಿದ ಧಾರಾಕಾರ ಗಾಳಿ ಮಳೆಗೆ ಮಡಿಕೇರಿ ಸಮೀಪದ ಮೇಕೇರಿಯಲ್ಲಿ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ.
ಮೇಕೇರಿ ಗ್ರಾಮದ ನಿವಾಸಿ ಪೊನ್ನಚ್ಚನ ಆನಂದ ಎಂಬುವವರ ವಾಸದ ಮನೆ ಮೇಲೆ ಸಮೀಪದಲ್ಲಿದ್ದ ಬೃಹತ್ ಗಾತ್ರದ ಮರ ಮಂಗಳವಾರ ಬೆಳಿಗ್ಗೆ ಸುರಿದ ಧಾರಾಕಾರ ಗಾಳಿ ಮಳೆಗೆ ಉರುಳಿ ಬಿದ್ದಿದೆ. ಇದರಿಂದ ಅಡುಗೆಮನೆ, ದನದ ಕೊಟ್ಟಿಗೆಯ ಗೋಡೆ ಗಳು,ಮೇಲ್ಚಾವಣಿಗೆ ಅಳವಡಿಸಲಾದ ಹೆಂಚು ಹಾಗೂ ಶೀಟ್ ಗಳು ಸಂಪೂರ್ಣ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.