ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರಿಗೆ ಕುಶಾಲನಗರದಲ್ಲಿ ಅದ್ಧೂರಿ ಸ್ವಾಗತ

ಕುಶಾಲನಗರ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಕೊಡಗು ಜಿಲ್ಲೆಗೆ ಮೊದಲ ಬಾರಿಗೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತ ಮಾಡಿದರು.ಕಾವೇರಿ ಮಾತೆಗೆ ಮಂಜುನಾಥ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ,ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ,ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್,ಕುಶಾಲನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್,ನಗರಾಧ್ಯಕ್ಷ ವಿಕ್ಟರ್ ಸೋನ್ಸ್,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರ್ಷಾದ್ ಪಿ.ಎಲ್,ಯುವ ಕಾಂಗ್ರೆಸ್ ಮುಖಂಡ ಆದಂ ಕುಶಾಲನಗರ ಇದ್ದರು.