ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ: ಕಳಪೆ ಗುಣಮಟ್ಟದ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶವಿಲ್ಲ!

May 22, 2025 - 12:55
May 22, 2025 - 12:55
 0  433
ರಸ್ತೆ  ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ:  ಕಳಪೆ ಗುಣಮಟ್ಟದ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶವಿಲ್ಲ!
ರಸ್ತೆ  ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ:  ಕಳಪೆ ಗುಣಮಟ್ಟದ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶವಿಲ್ಲ!

ಸೋಮವಾರಪೇಟೆ: ತಾಲ್ಲೂಕಿನ ಹೊಸತೋಟ ಹಾಗೂ ಗರಗಂದೂರು ನಡುವಿನ ಪಿಎಂಜಿಎಸ್.ವೈ ಅಡಿಯಲ್ಲಿ ನಿರ್ಮಾಣವಾಗಿರುವ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಖುದ್ದಾಗಿ ಶಾಸಕ ಡಾ.ಮಂತರ್ ಗೌಡ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯತ್ ಸಿಇಒ ರವರಿಂದ ಮಾಹಿತಿ ಪಡೆದ ಶಾಸಕರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಕಳಪೆ ಗುಣಮಟ್ಟದ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶವಿಲ್ಲ. ಈ ಕಾಮಗಾರಿ ನಿರ್ವಹಣೆ ಮಾಡಿದ ಗುತ್ತಿಗೆದಾರರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿ ಕಳಪೆ ಕಾಮಗಾರಿ ನಡೆದ ಸ್ಥಳದಲ್ಲಿ ಪುನಃ ಹೊಸ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ ಬಿ ಸತೀಶ್, ಹರದೂರು ಗ್ರಾಮ ಪಂಚಾಯಿತಿ ಸದಸ್ಯರಾದ ಸಲೀಂ ಹೊಸತೋಟ ಹಾಗೂ ಸ್ಥಳೀಯರು, ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 1
Love Love 0
Funny Funny 0
Angry Angry 0
Sad Sad 1
Wow Wow 0