ವಕ್ಫ್ ಸಂರಕ್ಷಣಾ ಪ್ರತಿಭಟನೆ: ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ: ಎಚ್.ಎ ಹಂಸ ಕೊಟ್ಟಮುಡಿ

ವಕ್ಫ್ ಸಂರಕ್ಷಣಾ ಪ್ರತಿಭಟನೆ: ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ: ಎಚ್.ಎ ಹಂಸ ಕೊಟ್ಟಮುಡಿ

ಮಡಿಕೇರಿ: ಕೇಂದ್ರ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ವಿರುದ್ಧವಾಗಿ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 22ರ ಮಂಗಳವಾರ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ನಡೆಯಲಿರುವ ವಕ್ಫ್ ಸಂರಕ್ಷಣಾ ಬೃಹತ್ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ ಕರೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಹಂಸ ಕೊಟ್ಟಮುಡಿ, ಏಪ್ರಿಲ್ 22 ರ ಮಂಗಳವಾರ ನಡೆಯಲಿರುವ ವಕ್ಫ್ ಸಂರಕ್ಷಣಾ ಪ್ರತಿಭಟನೆಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಲಯ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಸಮಿತಿ ಅಧ್ಯಕ್ಷರು, ಸದಸ್ಯರು,ಗ್ರಾಮ ಪಂಚಾಯಿತಿ ಸದಸ್ಯರು, ನಾಮ ನಿರ್ದೇಶಿತ ವಿವಿಧ ಸಮಿತಿಗಳ ಸದಸ್ಯರು, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ಭಾಗವಹಿಸಿ,  ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ‌ ಕರೆ ನೀಡಿರುವ ವಕ್ಫ್ ಸಂರಕ್ಷಣಾ ಪ್ರತಿಭಟನೆಗೆ ಕೈ ಜೋಡಿಸಬೇಕಾಗಿ ಎಚ್.ಎ ಹಂಸ ಕೊಟ್ಟಮುಡಿ ಮನವಿ ಮಾಡಿದ್ದಾರೆ‌.