ವರಣಾರ್ಭಟ:ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಜೀವ ಬಲಿ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು,ಮರದ ಕೊಂಬೆ ಬಿದ್ದು ಬೆಳೆಗಾರ ಸಾವನ್ನಪ್ಪಿದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಫಿ ಬೆಳೆಗಾರ ಪೊನ್ನಚoಡ ವಿಷ್ಣು ಬೆಳ್ಳಿಯಪ್ಪ( 64) ಮೃತ ದುರ್ದೈವಿಯಾಗಿದ್ದಾನೆ.ಮನೆಯಿಂದ ಹೊರ ಬರುತ್ತಿದ್ದಂತೆ ಮುರಿದು ಬಿದ್ದ ಮರದ ಕೊಂಬೆ,ತಲೆಗೆ ಗಂಭೀರ ಗಾಯಗೊಂಡು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಪೂರ್ವ ಮುಂಗಾರಿಗೆ ಜಿಲ್ಲೆಯಲ್ಲಿ ಎರಡು ಜೀವ ಬಲಿಯಾಗಿದೆ.