ವರುಣಾರ್ಭಟ: ನಾಪೋಕ್ಲು- ಮೂರ್ನಾಡು ಸಂಪರ್ಕ ರಸ್ತೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ

Jun 17, 2025 - 18:32
 0  218
ವರುಣಾರ್ಭಟ: ನಾಪೋಕ್ಲು- ಮೂರ್ನಾಡು ಸಂಪರ್ಕ ರಸ್ತೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು   ನಾಪೋಕ್ಲು ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆ ಎಂಬಲ್ಲಿ ಕಾವೇರಿ ನದಿ ಪ್ರವಾಹ ರಸ್ತೆಗೆ ಆವರಿಸಿದ್ದು ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಮಂಗಳವಾರ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ನಾಪೋಕ್ಲು ವ್ಯಾಪ್ತಿಯ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು ಮಂಗಳವಾರ ಸಂಜೆ ನಾಪೋಕ್ಲು ವಿನಿಂದ ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬೊಳಿಬಾಣೆ ಎಂಬಲ್ಲಿ ರಸ್ತೆಯ ಮೇಲೆ ಕಾವೇರಿ ನದಿ ಪ್ರವಾಹ ಒಂದು ಅಡಿಗಳಷ್ಟು ಹರಿಯುತ್ತಿದ್ದು ಲಘು ವಾಹನಗಳು ಸಂಚರಿಸುತ್ತಿದೆ. ಇದೇ ರೀತಿ ಮಳೆ ಮುಂದುವರೆದರೆ ನಾಪೋಕ್ಲು ಮೂರ್ನಾಡು ಸಂಪರ್ಕ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ಸಂಪೂರ್ಣ ಕಡಿತಗೊಳ್ಳುವ ಸಾಧ್ಯತೆ ಇದೆ.

What's Your Reaction?

Like Like 2
Dislike Dislike 1
Love Love 1
Funny Funny 0
Angry Angry 0
Sad Sad 0
Wow Wow 0