ವರುಣಾರ್ಭಟ: ಮೇ 28 ರಂದು ಕೊಡಗು ವಿವಿಗೆ ಒಳಪಡುವ ಕಾಲೇಜುಗಳಿಗೆ ರಜೆ ಘೋಷಣೆ

ವರುಣಾರ್ಭಟ: ಮೇ 28 ರಂದು ಕೊಡಗು ವಿವಿಗೆ ಒಳಪಡುವ ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಹಾಗೂ ಸಂಪರ್ಕ ಕಡಿತಗಳಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಇರುವ ಅಡೆತಡೆಗಳನ್ನು ಅವಲೋಕಿಸಿ ಹಾಗೂ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ, ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ 28-5-2025 ರಂದು ಒಂದು ದಿನದ ರಜೆ ಘೋಷಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಆದೇಶ ಹೊರಡಿಸಿದ್ದಾರೆ.

ಈ ದಿನಗಳಲ್ಲಿ ನಿಗದಿತವಾಗಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ಮರು ನಿಗದಿಪಡಿಸಲು ಸಂಬಂಧಪಟ್ಟ ಪರೀಕ್ಷಾ ಮಂಡಳಿಗಳಿಗೆ ಸೂಚಿಸಲಾಗಿದೆ. ಎಂದು ಪ್ರೊ. ಅಶೋಕ ಸಂಗಪ್ಪ ಆಲೂರ ಕುಲಪತಿ ಕೊಡಗು ವಿಶ್ವವಿದ್ಯಾಲಯ ಅವರು ತಿಳಿಸಿದ್ದಾರೆ.