ವಸತಿ ಶಾಲೆಗಳ ನೌಕರರ ಸಂಘದಿಂದ ಪ್ರತಿಭಟನೆ: ಖಾಯಂ ಬೋಧಕ-ಬೋಧಕೇತರ ಸಿಬ್ಬಂದಿಗಳ ಶ್ರಮದಿಂದ ಪ್ರತಿ ಬಾರಿ ಉತ್ತಮ ಫಲಿತಾಂಶ: ವಿ.ಅಲೋಕ್

ವಸತಿ ಶಾಲೆಗಳ ನೌಕರರ ಸಂಘದಿಂದ ಪ್ರತಿಭಟನೆ:  ಖಾಯಂ ಬೋಧಕ-ಬೋಧಕೇತರ ಸಿಬ್ಬಂದಿಗಳ ಶ್ರಮದಿಂದ ಪ್ರತಿ ಬಾರಿ ಉತ್ತಮ ಫಲಿತಾಂಶ:  ವಿ.ಅಲೋಕ್

ಮಡಿಕೇರಿ:ಖಾಯಂ ಬೋಧಕ-ಬೋಧಕೇತರ ಸಿಬ್ಬಂದಿಗಳ ಶ್ರಮದಿಂದ ಪ್ರತಿ ಭಾರಿ ಉತ್ತಮ ಫಲಿತಾಂಶ ಬರುತ್ತಿದೆ. ನವೋದಯ ವಿದ್ಯಾಲಯ ಮತ್ತು ಶಿಕ್ಷಣ ಇಲಾಖೆಯ ಶಾಲೆಗಳ ಸಿಬ್ಬಂದಿಗಳಿಗೆ ದೊರೆಯುವ ಹಲವು ಸೌಲಭ್ಯಗಳು ಕ್ರೈಸ್ ಖಾಯಂ ನೌಕರರಿಗೆ ಸಿಗುತ್ತಿಲ್ಲ. ಆದರೂ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ಶಿಕ್ಷಕರು ನೀಡುತ್ತಿದ್ದಾರೆ. ಆದರೆ, ನಮಗೆ ಹಿಡಿಗಂಟು, ಜ್ಯೋತಿ ಸಂಜೀವಿನಿ ಸೇರಿದಂತೆ ಇತರೆ ವ್ಯವಸ್ಥೆಯಿಲ್ಲ. ಇವುಗಳನೆಲ್ಲ ನಮಗೂ ನೀಡಬೇಕೆಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ,ವಸತಿ‌ ಶಾಲೆಗಳ ನೌಕರರ ಸಂಘದ ಕೊಡಗು ಘಟಕ ಜಿಲ್ಲಾಧ್ಯಕ್ಷ ವಿ.ಅಲೋಕ್ ಕುಮಾರ್ ಒತ್ತಾಯಿಸಿದ್ದಾರೆ.

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ,ಸೋಮವಾರ ವಸತಿ ಶಾಲೆಗಳ ಖಾಯಂ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ನೌಕರರ ಸಂಘ, ಕೊಡಗು ಜಿಲ್ಲಾ ಘಟಕದ ಪ್ರತಿಭಟನೆ ನೇತೃತ್ವ ವಹಿಸಿ ಅಲೋಕ್ ಕುಮಾರ್ ಮಾತನಾಡಿದರು.

 ನವೋದಯ ವಿದ್ಯಾಲಯ ಮತ್ತು ಶಿಕ್ಷಣ ಇಲಾಖೆಯ ಶಾಲೆಗಳ ಸಿಬ್ಬಂದಿಗಳಿಗೆ ದೊರೆಯುವ ಹಲವು ಸೌಲಭ್ಯಗಳು ಕ್ರೈಸ್ ಖಾಯಂ ನೌಕರರಿಗೆ ಸಿಗುತ್ತಿಲ್ಲ. ಆದರೂ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ಶಿಕ್ಷಕರು ನೀಡುತ್ತಿದ್ದಾರೆ. ಆದರೆ, ನಮಗೆ ಹಿಡಿಗಂಟು, ಜ್ಯೋತಿ ಸಂಜೀವಿನಿ ಸೇರಿದಂತೆ ಇತರೆ ವ್ಯವಸ್ಥೆಯಿಲ್ಲ. ಇವುಗಳನೆಲ್ಲ ನಮಗೂ ನೀಡಬೇಕು.

ಸರ್ಕಾರ ಈ ಕೂಡಲೇ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್ಸಿ-ಎಸ್ಟಿ, ಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ಖಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಟಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪಧಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯತಿ ನೀಡಬೇಕು. ಖಾಯಂ ನೌಕರರಿಗೆ ಶೇ.೧೦ ವಿಶೇಷ ಭತ್ಯೆ ಮಂಜೂರು ಮಾಡಬೇಕೆಂದು ವಿ.ಅಲೋಕ್ ಕುಮಾರ್ ಆಗ್ರಹಿಸಿದರು.

ಈ ಸಂದರ್ಭ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಚಿದಂಬರ, ಖಜಾಂಚಿ ಎಂ.ಆರ್.ಮೀನಾ, ಸಹಕಾರ್ಯದರ್ಶಿ ಎಚ್.ಆರ್.ಷಡಕ್ಷರಿ, ತಾಲೂಕು ಕಾರ್ಯದರ್ಶಿಗಳಾದ ಕೆ.ಸಂತೋಷ್ ಕುಮಾರ್, ಕೆ.ವಿ.ಅಮೃತ್, ತಾಂತ್ರಿಕ ಕಾರ್ಯದರ್ಶಿ ಪಿ.ಕೆ.ಆಶಿಫ್, ದಿಲನ್ ಸೇರಿದಂತೆ ಮತ್ತಿತರರು ಇದ್ದರು.