ವಿಪತ್ತು ನಿರ್ವಹಣಾ ಕಾರ್ಯಪಡೆ ಸಭೆ: ಮಳೆಗಾಲದಲ್ಲಿ ಜನರ ಸಂರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ: ಹೆಚ್.ಎ ಹಂಸ ಕೊಟ್ಟಮುಡಿ

ವಿಪತ್ತು ನಿರ್ವಹಣಾ ಕಾರ್ಯಪಡೆ ಸಭೆ: ಮಳೆಗಾಲದಲ್ಲಿ ಜನರ ಸಂರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ: ಹೆಚ್.ಎ ಹಂಸ ಕೊಟ್ಟಮುಡಿ

ಮಡಿಕೇರಿ: ಜಿಲ್ಲೆಯಲ್ಲಿ ಅವಧಿಗೂ ಮೊದಲೇ ಮುಂಗಾರು ಪ್ರವೇಶಿಸಿದ್ದು,ಮಳೆಗಾಲದಲ್ಲಿ ಗ್ರಾಮದ ಜನರ ಸಂರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ ಕರೆ ನೀಡಿದ್ದಾರೆ.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದವಾಡ ಬೊಳಿಬಾಣೆ,ಕೊಟ್ಟಮುಡಿ, ವಾಟೆಕಾಡು,ಬಲಮುರಿ ಗ್ರಾಮದಲ್ಲಿ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗುವುದಿರಂದ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲು ಗ್ರಾಮ‌ ಪಂಚಾಯಿತಿಯಲ್ಲಿ ನಡೆದ ವಿಪತ್ತು ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

ತುರ್ತು ಸಂದರ್ಭಗಳಲ್ಲಿ ಪಂಚಾಯಿತಿ ಸದಸ್ಯನ್ನೊಳಗೊಂಡು ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಿ,ಸಮಿತಿಗಳು ಕಾರ್ಯಪ್ರವೃತರಾಗಿ ತುರ್ತು ಸಂದರ್ಭಗಳಲ್ಲಿ ಆಯಾ ವಾರ್ಡ್ ಮಟ್ಟದಲ್ಲಿ ಬೇಕಾದ ಕೆಲಸಗಳನ್ನು ಪರಿಹಾರ, ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪಂಚಾಯಿತಿ ವ್ಯಾಪ್ತಿಯ ಜನರ ಸಂರಕ್ಷಣೆ ಹಾಗೂ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು.

ಪಂಚಾಯಿತಿ ವ್ಯಾಪ್ತಿಯಲ್ಲಿ ತೀವ್ರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಪರಿಹಾರೋಪಾಯಗಳನ್ನು ನೀಡಲು ಮಡಿಕೇರಿ ಕ್ಷೇತ್ರದ ಶಾಸಕಾರದ ಡಾ ಮಂತರ್ ಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಪುನರ್ವಸತಿ ನೀಡಲು ಕ್ರಮಕೈಗೊಳ್ಳಲಾಗುವುದೆಂದು ಮಾಹಿತಿ ನೀಡಿದರು.

ಇದೇ ಸಂದರ್ಭ ಮಳೆಯಿಂದಾಗಿ ಹಾನಿ ಸಂಭವಿಸುವಾಗ ತುರ್ತು ಪರಿಹಾರ ಕಾರ್ಯಗಳಿಗಾಗಿ ಒಂದು ಲಕ್ಷ ರೂ ಕಾಯ್ದಿರಿಸಿ,ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಮೋದನೆ ಪಡೆದೊಳ್ಳಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನುರಾಧ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ ಮೊಣ್ಣಪ್ಪ, ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ ಹಮೀದ್, ಚೌರೀರ ನವೀನ್, ಮೊಯ್ದು, ಲಕ್ಷ್ಮಿ ಪಾರ್ವತಿ, ಕುಸುಮಾವತಿ ,ಕಡ್ಲೆರ ಟೈನಿ,ಪಿಡಿಓ ಎ.ಎ ಅಬ್ದುಲ್ಲಾ ,ಗ್ರಾಮ ಆಡಳಿತಾಧಿಕಾರಿ ಸಂತೋಷ್ ಪಾಟೀಲ್,ಮೂರ್ನಾಡು ಠಾಣಾಧಿಕಾರಿ ಶ್ರೀನಿವಾಸ್ ಇದ್ದರು.