ವಿರಾಜಪೇಟೆ ಪುರಸಭೆ ಕಾಂಗ್ರೆಸ್ ಸದಸ್ಯರೊಂದಿಗೆ ಎ.ಎಸ್ ಪೊನ್ನಣ್ಣ ‌ಸಭೆ

Apr 20, 2025 - 17:01
 0  60
ವಿರಾಜಪೇಟೆ ಪುರಸಭೆ ಕಾಂಗ್ರೆಸ್ ಸದಸ್ಯರೊಂದಿಗೆ ಎ.ಎಸ್ ಪೊನ್ನಣ್ಣ ‌ಸಭೆ
ವಿರಾಜಪೇಟೆ ಪುರಸಭೆ ಕಾಂಗ್ರೆಸ್ ಸದಸ್ಯರೊಂದಿಗೆ ಎ.ಎಸ್ ಪೊನ್ನಣ್ಣ ‌ಸಭೆ

ವಿರಾಜಪೇಟೆ :ಪುರಸಭೆಯ ಕಾಂಗ್ರೆಸ್ ಸದಸ್ಯರೊಂದಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ವಿಶೇಷ ಸಭೆ ನಡೆಸಿದರು.   

ಪುರಸಭೆಯ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಆಯ್ಕೆ ಮಾಡಬೇಕಾಗಿದ್ದು, ಇಂದು ಈ ವಿಚಾರವಾಗಿ ನಡೆದ ಸಭೆಯಲ್ಲಿ ಒಮ್ಮತದ ಇಬ್ಬರನ್ನು ಸಾಯಿ ಸಮಿತಿಗಳಿಗೆ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ವಿವರ ಪಡೆದ ಮಾನ್ಯ ಶಾಸಕರು, ಸದಸ್ಯರುಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ವಿರಾಜಪೇಟೆ ನಗರದ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸದಸ್ಯರುಗಳೊಂದಿಗೆ ಚರ್ಚಿಸಿದರು. ಸಭೆಯಲ್ಲಿ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0