ವಿರಾಜಪೇಟೆ:ಅನ್ವಾರುಲ್ ಹುದಾ ಕ್ಯಾಂಪಸ್ ಬಳಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದ ಎಎಸ್ ಪೊನ್ನಣ್ಣ
ವಿರಾಜಪೇಟೆ :ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಆರ್ಜಿ ಗ್ರಾಮದ ಅನ್ವಾರುಲ್ ಹುದಾ ಶಾಲೆಯ ಬಳಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಪರಿಶೀಲಿಸಿದರು. ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವುದರೊಂದಿಗೆ, ಮಳೆಯ ತೀವ್ರತೆಯನ್ನು ಗಮನಿಸಿ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ,ಪುರ ಸಭೆ ಸದಸ್ಯರು,ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.