ವಿರಾಜಪೇಟೆ:ಮಳೆಯಿಂದ ಮರ ಬಿದ್ದು ಮೃತಪಟ್ಟ ಗೌರಿ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ವಿತರಿಸಿದ ಎ.ಎಸ್ ಪೊನ್ನಣ್ಣ

ವಿರಾಜಪೇಟೆ:ಮಳೆಯಿಂದ ಮರ ಬಿದ್ದು ಮೃತಪಟ್ಟ ಗೌರಿ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ವಿತರಿಸಿದ ಎ.ಎಸ್ ಪೊನ್ನಣ್ಣ
ಐದು ಲಕ್ಷ ರೂ ಪರಿಹಾರ ವಿತರಿಸಿದ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ:ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಇತ್ತೀಚೆಗೆ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಮರ ಬಿದ್ದು ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಪರಿಹಾರ ವಿತರಿಸಿದರು. Lಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತನ್ನ ಮನೆಯ ಎದುರು ಕೆಲಸ ಮಾಡುತ್ತಿದ್ದ ಸಂದರ್ಭ, ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿತ್ತು. ಪರಿಹಾರ ವಿತರಿಸಿ ಮನೆಯವರಿಗೆ ಸಾಂತ್ವನ ಹೇಳಿದರು. ಮೃತ ಗೌರಿಯವರು ಇಬ್ಬರು ಮಕ್ಕಳು ಅಗಲಿದ್ದು, ಶಾಸಕರ ಶಿಫಾರಸ್ಸಿನ ಮೇರೆಗೆ, ಮೃತರ ವಾರಿಸುದಾರರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ ಮಂಜೂರಾದ ₹ 5 ಲಕ್ಷದ ಹಕ್ಕು ಪತ್ರವನ್ನು ಮಾನ್ಯ ಶಾಸಕರು ನೀಡಿದರು.   

ಈ ಸಂದರ್ಭದಲ್ಲಿ ವಿರಾಜಪೇಟೆ ತಾಲೂಕು ದಂಡಾಧಿಕಾರಿಗಳು, ಆರ್ ಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ಮತ್ತು ಕಾಂಗ್ರೆಸ್ ಮುಖಂಡರು ಉಪಸಿತರಿದ್ದರು.