ವಿಶು‌ ಕಪ್ ಫುಟ್ಬಾಲ್ ಪಂದ್ಯಾವಳಿ: ವಿರಾಜಪೇಟೆ ಭಾಗದಲ್ಲಿ ಜನಪ್ರಿಯಗೊಳ್ಳುತ್ತಿರುವ ಫುಟ್ಬಾಲ್: ಎ.ಎಸ್ ಪೊನ್ನಣ್ಣ

Apr 20, 2025 - 20:56
 0  9
ವಿಶು‌ ಕಪ್ ಫುಟ್ಬಾಲ್ ಪಂದ್ಯಾವಳಿ: ವಿರಾಜಪೇಟೆ ಭಾಗದಲ್ಲಿ ಜನಪ್ರಿಯಗೊಳ್ಳುತ್ತಿರುವ ಫುಟ್ಬಾಲ್: ಎ.ಎಸ್ ಪೊನ್ನಣ್ಣ
ವಿಶು‌ ಕಪ್ ಫುಟ್ಬಾಲ್ ಪಂದ್ಯಾವಳಿ: ವಿರಾಜಪೇಟೆ ಭಾಗದಲ್ಲಿ ಜನಪ್ರಿಯಗೊಳ್ಳುತ್ತಿರುವ ಫುಟ್ಬಾಲ್: ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಇಲ್ಲಿನ ತಾಲೂಕು ಮೈದಾನದಲ್ಲಿ ಹಿಂದೂ ಮಲಯಾಳಿ ಅಸೋಸಿಯೇಷನ್ ಹಮ್ಮಿಕೊಂಡಿರುವ ವಿಶು ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಮಾತನಾಡಿದರು.     

 ಯುವ ಫುಟ್ಬಾಲ್ ಆಟಗಾರರನ್ನು ಪ್ರಶಂಸಿಸುತ್ತಾ ಮಾತನಾಡಿದ ಮಾನ್ಯ ಶಾಸಕರು ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಫುಟ್ಬಾಲ್ ಕ್ರೀಡೆಯು ಜನಪ್ರಿಯಗೊಳ್ಳುತ್ತಿದ್ದು, ವಿರಾಜಪೇಟೆ ಸುತ್ತಮುತ್ತಲಿನ ಫುಟ್ಬಾಲ್ ಪ್ರೇಮಿಗಳಿಗೆ ಮನರಂಜನೆ ಜೊತೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದೆ. ಫುಟ್ಬಾಲ್ ಆಟವು ಪ್ರತಿ ಆಟಗಾರನಿಗೆ ಸದೃಢತೆ ತರುವುದರೊಂದಿಗೆ ಕ್ರೀಡೆಯಲ್ಲಿ ಮುಂದುವರೆಯಲು ಅನುಕೂಲ ಆಗುವ ನಿಟ್ಟಿನಲ್ಲಿ ಯುವಕರು ಫುಟ್ಬಾಲ್ ನತ್ತ ಮತ್ತಷ್ಟು ಸೆಳೆಯುವಂತಾಗಲಿ ಎಂದು ಕರೆ ನೀಡಿದರು.  

ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಫುಟ್ಬಾಲ್ ಕ್ರೀಡೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು. 

ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಆಹ್ವಾನಿತ ಅತಿಥಿಗಳು,ಕಾರ್ಯಕ್ರಮ ಆಯೋಜಕರು ಹಾಗೂ ಕ್ರೀಡಾ ಪ್ರೇಮಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0