ಶ್ರೀ ದಕ್ಷಿಣ ಮಾರಿಯಮ್ಮ ದೇವಸ್ಥಾನದ ಕರಗ ಮಹೋತ್ಸವ: ಎ.ಎಸ್ ಪೊನ್ನಣ್ಣ ಭಾಗಿ

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ನಗರದಲ್ಲಿ ಇರುವ , ಶ್ರೀ ದಕ್ಷಿಣ ಮಾರಿಯಮ್ಮ ದೇವಸ್ಥಾನದ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.ಇತಿಹಾಸ ಪ್ರಸಿದ್ಧ ಈ ಕರಗ ಮಹೋತ್ಸವವು, ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದು, ಈ ಭಾಗದ ಸಾರ್ವಜನಿಕರ ಹಾಗೂ ಭಕ್ತಾದಿಗಳ ಶ್ರದ್ಧಾಭಕ್ತಿಯ ಸಂಕೇತವಾಗಿದೆ. ಶ್ರೀದೇವಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಕರಗ ಮಹೋತ್ಸವ ಪ್ರಾರಂಭಗೊಂಡಿತು.ಭಕ್ತಾದಿಗಳ ಜೈಕಾರದೊಂದಿಗೆ ನಗರದ ಉದ್ದಗಲಕ್ಕೂ ಈ ಕರಗ ಉತ್ಸವ ಸಂಚರಿಸಿತು.ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಈ ಸಂದರ್ಭದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.