ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಎ ಎಸ್ ಪೊನ್ನಣ್ಣ. ಚೆನ್ನಯ್ಯನಕೋಟೆಯಲ್ಲಿ ಕ್ರಿಕೆಟ್ ಪಂದ್ಯಾವಳಿ

ಸಿದ್ದಾಪುರ :- ಪ್ರತಿಯೊಬ್ಬರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.
ಚೆನ್ನಯ್ಯನ ಕೋಟೆ ಶಾಲಾ ಮೈದಾನದಲ್ಲಿ ಚಾಲೆಂಜರ್ಸ್ ಯೂತ್ ಕ್ಲಬ್ ವತಿಯಿಂದ 6ನೇ ವರ್ಷದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕ್ರೀಡೆ ಅತ್ಯಗತ್ಯವಾಗಿದ್ದು ಕ್ರೀಡೆಯ ಮೂಲಕ ಸಾಧನೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದ ಅವರು.
ಸರ್ಕಾರ ಕ್ರೀಡೆಗಳಿಗೂ ಹೆಚ್ಚು ಒತ್ತು ನೀಡುತ್ತಿದ್ದು ಕ್ಷೇತ್ರದಲ್ಲಿ ಕ್ರೀಡಾಪಟುಗಳ ಅನುಕೂಲಕ್ಕಾಗಿ ಸುಸಜ್ಜಿತ ಆಟದ ಮೈದಾನ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದ್ದು ಕ್ರೀಡಾಪಟುಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು .
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ ಗ್ರಾಮೀಣ ಕ್ರೀಡಾಪಟುಗಳು ಸೂಕ್ತ ಮೈದಾನದ ವ್ಯವಸ್ಥೆ ಇಲ್ಲದೇ ಕ್ರೀಡೆಯಿಂದ ವಂಚಿತರಾಗುತ್ತಿದ್ದಾರೆ .ಪ್ರತಿ ಗ್ರಾಮ ಮಟ್ಟದಲ್ಲೂ ಸಾರ್ವಜನಿಕ ಆಟದ ಮೈದಾನದ ಅವಶ್ಯಕತೆ ಇದ್ದು ಕ್ರೀಡಾಪಟುಗಳ ಅನುಕೂಲಕ್ಕಾಗಿ ಸರ್ಕಾರ ಮೈದಾನದ ವ್ಯವಸ್ಥೆ ಮಾಡಬೇಕೆಂದು ಹೇಳಿದ ಅವರು ಯುವ ಸಮೂಹ ದುಶ್ಟಟಗಳಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು.
ಇದೇ ಸಂದರ್ಭ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅಂತಿಮ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಬ್ಬೀರ್, ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಮಂಜು, ಚೆಸ್ಕಾಂ ಸಲಹಾ ಸಮಿತಿ ಸದಸ್ಯ ಚೇಕು, ಗ್ರಾಮ ಪಂಚಾಯಿತಿ ಸದಸ್ಯ ವಿಜು, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ದಿನೇಶ್,ಚಾಲೆಂಜರ್ಸ್ ಯೂತ್ ಕ್ಲಬ್ ಸಂಘದ ಅಧ್ಯಕ್ಷ ರವೀಂದ್ರ ಬಾವೆ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಬ್ಬೀರ್, ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಮಂಜು, ಚೆಸ್ಕಾಂ ಸಲಹಾ ಸಮಿತಿ ಸದಸ್ಯ ಚೇಕು, ಗ್ರಾಮ ಪಂಚಾಯಿತಿ ಸದಸ್ಯ ವಿಜು, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಭಿಜಿತ್ ನಾಯರ್, ಅನಿಲ್, ಶೀಲಾ, ಶಂಕರ, ಅರುಣ್, ಮೋಹನ್ ,ಅಬ್ದುಲ್ ಮುಜೀಬ್, ಅಬ್ದುಲ್ ಜಲೀಲ್, ಅಶ್ರಪ್,ಹರಿದಾಸ್ ,ರದೀಶ್ ಕುಮಾರ್ ಮಂಜುಳಾ, ಉರೈಸ್,ವಿನೋದ್ , ಮನು, ಶಿಹಾಬ್ ಸೇರಿದಂತೆ ಆಟಗಾರರು, ಸ್ಥಳೀಯರು ಹಾಜರಿದ್ದರು.
What's Your Reaction?






