ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮಳೆಗಾಲವನ್ನು ಎದುರಿಸಿ: ಎ.ಎಸ್ ಪೊನ್ನಣ್ಣ

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ  ಮಳೆಗಾಲವನ್ನು ಎದುರಿಸಿ: ಎ.ಎಸ್ ಪೊನ್ನಣ್ಣ
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ  ಮಳೆಗಾಲವನ್ನು ಎದುರಿಸಿ: ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಟಾಸ್ಕ್ ಫೋರ್ಸ್ ಸಭೆ ನಡೆಯಿತು.ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ ನವರು ಅಧ್ಯಕ್ಷತೆ ವಹಿಸಿದರು.ಸಭೆಯನ್ನು ಉದ್ದೇಶಿಸಿ ಮೊದಲಿಗೆ ಮಾತನಾಡಿದ ಶಾಸಕರು, ಈ ಬಾರಿಯ ಮಳೆಗಾಲವನ್ನು ಎದುರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಮಾಡಿಕೊಂಡಿರುವ ತಯಾರಿ ಬಗ್ಗೆ ವಿವರಣೆ ಕೇಳಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಈ ಬಾರಿಯ ಮಳೆಗಾಲವನ್ನು ಎದುರಿಸಲು ಎಲ್ಲರೂ ಸಜ್ಜಾಗಿರುವಂತೆ ಸೂಚಿಸಿದ ಶಾಸಕರು, ಸಾರ್ವಜನಿಕರ ಯಾವುದೇ ದೂರು ಬಂದಲ್ಲಿ ಅದನ್ನು ಕೂಡಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದರು. ಟಾಸ್ಕ್ ಫೋರ್ಸ್ ನ ಮುಖ್ಯಸ್ಥರು ನಿರಂತರವಾಗಿ ಶಾಸಕರ ಸಂಪರ್ಕದಲ್ಲಿದ್ದು ಕಾಲಕಾಲಕ್ಕೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.   

ಈ ಸಭೆಯಲ್ಲಿ ತಾಲೂಕು ದಂಡಧಿಕಾರಿಗಳದ ವಿರಾಜಪೇಟೆಯ ಅನಂತ ಶಂಕರ್, ಪೊನ್ನಂಪೇಟೆಯ ಮೋಹನ್, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಕಾರ್ಯನಿರ್ವಣಾಧಿಕಾರಿಗಳಾದ ಅಪ್ಪಣ್ಣ ,ಗ್ಯಾರೆಂಟಿ ಅನುಷ್ಠಾನದ ತಾಲೂಕು ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.