ಸಿದ್ದಾಪುರ: ಆನೆ ದಾಳಿಯಿಂದ ಬಲಿಯಾದ ಕುಕ್ಕನೂರು ಪುರುಷೋತ್ತಮ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎ.ಎಸ್ ಪೊನ್ನಣ್ಣ
ಸಿದ್ದಾಪುರ: ಕರಡಿಗೋಡು ಗ್ರಾಮದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸಾವಿಗೀಡಾದ ಕಾಫಿ ಬೆಳೆಗಾರ ಕುಕ್ಕುನೂರು ಪುರುಷೋತ್ತಮ ಅವರ ಮನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭೇಟಿ ಮಾಡಿ ಮನೆಯವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ, ಅಳಿಯಂದಿರಾದ ಮಡಿಕೇರಿ ತಹಶೀಲ್ದಾರ್ ಪ್ರವೀಣ್,ಸಿದ್ದಾಪುರ ವಲಯ ಅಧ್ಯಕ್ಷರಾದ ಪ್ರತೀಶ್ ಹಾಗೂ ಸೂರಜ್ ಹೊಸೂರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

