ಸಿದ್ದಾಪುರ: ಎಸ್ ಎನ್ ಡಿ ಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ: ಆರೋಗ್ಯ ಕಾಳಜಿಯ ಆರೈಕೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಿ: ಮಾಜಿ ಶಾಸಕ ಕೆ.ಜಿ ಬೋಪಯ್ಯ

ಸಿದ್ದಾಪುರ: ಎಸ್ ಎನ್ ಡಿ ಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ:  ಆರೋಗ್ಯ ಕಾಳಜಿಯ ಆರೈಕೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಿ: ಮಾಜಿ ಶಾಸಕ ಕೆ.ಜಿ ಬೋಪಯ್ಯ
ಸಿದ್ದಾಪುರ: ಎಸ್ ಎನ್ ಡಿ ಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ:  ಆರೋಗ್ಯ ಕಾಳಜಿಯ ಆರೈಕೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಿ: ಮಾಜಿ ಶಾಸಕ ಕೆ.ಜಿ ಬೋಪಯ್ಯ

ಸಿದ್ದಾಪುರ: ಎಸ್‌ಎನ್‌ಡಿಪಿ ಯೋಗಂ ಯೂನಿಯನ್ ಸಿದ್ದಾಪುರ ಹಾಗೂ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಆಯುರ್ವೇದ ಆಸ್ಪತ್ರೆ ಸುಳ್ಯ ಇವರ ಸಹಯೋಗದಲ್ಲಿ ಸಿದ್ದಾಪುರದ ಸ್ವರ್ಣಮಾಲಾ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಕೆ ಜಿ ಬೋಪಯ್ಯ ಶಿಬಿರ ಉದ್ಘಾಟಿಸಿ ಮಾತನಾಡಿ ಆರೋಗ್ಯ ಕಾಳಜಿಯ ಆರೈಕೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಹೇಳಿದ ಅವರು ಎಸ್ ಎನ್ ಡಿ ಪಿ ಸಂಘಟನೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು ಇದರ ಸದುಪಯೋಗಪಡಿಸಿಕೊಂಡು ಸಂಘಟನೆ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದ ಅವರು ಕೆವಿಜಿ ಆಸ್ಪತ್ರೆ ಸಂಸ್ಥೆ ಗ್ರಾಮೀಣ ಭಾಗದಲ್ಲೂ ತಮ್ಮ ಸೇವೆಯನ್ನು ನೀಡಿ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ ದುಚ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಗುಣಮಟ್ಟದ ಪೌಷ್ಟಿಕ ಆಹಾರ ಸೇವನೆ ಯೊಂದಿಗೆ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಎಸ್ ಎನ್ ಡಿ ಪಿ ಸಂಘಟನೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ಎಸ್‌ಎನ್‌ಡಿಪಿ ಯೂನಿಯನ್ ಜಿಲ್ಲಾಧ್ಯಕ್ಷ.ವಿ.ಕೆ. ಲೋಕೇಶ್ ಮಾತನಾಡಿ ಸಂಘಟನೆ ವತಿಯಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಆರೋಗ್ಯ, ಶಿಕ್ಷಣ, ಸಂತ್ರಸ್ತರಿಗೆ ನೆರವು, ಸಂಕಷ್ಟದಲ್ಲಿರುವವರಿಗೆ ಸಹಾಯ, ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ,ಇದೀಗ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರವನ್ನ ಆಯೋಜಿಸಲಾಗಿತ್ತು.ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ಐನೂರಕ್ಕೆ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.   

ನುರಿತ ವೈದರಿಗಳಿಂದ ಸ್ತ್ರೀ ರೋಗ, ಶಸ್ತ್ರ ಚಿಕಿತ್ಸೆ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗಗಳ ವೈದ್ಯರುಗಳು ತಪಾಸಣೆ ನಡೆಸಿ ಆರೋಗ್ಯ ಕಾಳಜಿ ಬಗ್ಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿರ್ದೇಶಕ ಹಾಗೂ ಸುಳ್ಯ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಕೆ.ವಿ. ಚಿದಾನಂದ, ಎಸ್‌ಎನ್‌ಡಿಪಿ ಯೂನಿಯನ್ ಉಪಾಧ್ಯಕ್ಷ ಆರ್. ರಾಜನ್, ಕಾರ್ಯದರ್ಶಿ ಕೆ.ವಿ. ಪ್ರೇಮಾನಂದ, ವನಿತ, ಯೂನಿಯನ್ ಜಿಲ್ಲಾಧ್ಯಕ್ಷೆ ರೀಶಾ ಸುರೇಂದ್ರ, ಡಾ ಉದಯ್ ಕುಮಾರ್ ಸೇರಿದಂತೆ ಆಸ್ಪತ್ರೆಯ ವೈದರು ಸಿಬ್ಬಂದಿಗಳು ಪ್ರಮುಖರು ಹಾಜರಿದ್ದರು.