ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಅಬ್ಬರ:ಆರ್.ಸಿ.ಬಿ& ಹೈದರಾಬಾದ್ ಪಂದ್ಯ ಲಕ್ನೋಗೆ ಶಿಫ್ಟ್

ಬೆಂಗಳೂರು:ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ತಂಡಗಳ ನಡುವಿನ ಲೀಗ್ ಪಂದ್ಯವನ್ನು ಬೆಂಗಳೂರಿನಿಂದ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಮ್‌ಗೆ ಸ್ಥಳಾಂತರಿಸಲಾಗಿದೆ.ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.ಮೇ 17ರಂದು ಮಳೆಯಿಂದಾಗಿ ಆರ್.ಸಿ.ಬಿ ಹಾಗೂ ಕೆ.ಕೆಆರ್ ಪಂದ್ಯ ರದ್ದುಗೊಂಡಿತ್ತು.
What's Your Reaction?






