ಸುಂಟ್ಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವ ಕಾಂಗ್ರೆಸ್ ಮುಖಂಡರ ಭೇಟಿ: ಸಮಸ್ಯೆಗಳ ಬಗ್ಗೆ ಪರಿಹಾರದ ಭರವಸೆ ನೀಡಿದ ಯುವ ಕಾಂಗ್ರೆಸ್ ಮುಖಂಡರು

ಸುಂಟಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಭೇಟಿ ನೀಡಿದ ಘಟನೆ ಗುರುವಾರ ನಡೆದಿದೆ. ರಾತ್ರಿ ಪಾಳಯದಲ್ಲಿ ಆಸ್ಪತ್ರೆಯಲ್ಲಿ ವೈದ್ಯರ ಅಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನಲೆ ಕೂಡಲೇ ಸ್ಪಂದಿಸಿದ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಉಪಾಧ್ಯಕ್ಷ ಮೈಸಿ ಕತ್ತಣಿರ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಮ್, ಮಡಿಕೇರಿ ವಿಧಾನಸಭಾ ಅಧ್ಯಕ್ಷ ಅನೂಪ್ ಕುಮಾರ್ , ಯುವ ಮುಖಂಡ ಶ್ರೀ ರಾಮ್ ಮತ್ತು ಹಾರಿ ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಮಸ್ಯೆಗಳ ಬಗ್ಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಸಮಸ್ಯೆಗಳನ್ನಾಲಿಸಿದ ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ, ಉಪಾಧ್ಯಕ್ಷ ಮೈಸಿ ಕತ್ತಣಿರವರು,ಶಾಸಕರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳ ಬಳಿ ವಿಷಯ ಪ್ರಸ್ತಾಪಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.
What's Your Reaction?






