ಸುಂಟ್ಟಿಕೊಪ್ಪ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಾರಂಭ: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾತಿ ಪಡೆಯಲು ಅನೂಪ್ ಕುಮಾರ್ ಮನವಿ

ಸುಂಟ್ಟಿಕೊಪ್ಪ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಾರಂಭ:  ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾತಿ ಪಡೆಯಲು ಅನೂಪ್ ಕುಮಾರ್ ಮನವಿ

ಸುಂಟ್ಟಿಕೊಪ್ಪ:ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಗೆ ದಾಖಲಾತಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಮಾಡುವಂತೆ ಸುಂಟ್ಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅನೂಪ್ ಕುಮಾರ್ ಸುಂಟ್ಟಿಕೊಪ್ಪ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು,ಸುಂಟ್ಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಬಡ ವಿದ್ಯಾರ್ಥಿಗಳ ಆಸರೆಯಾಗಿರುವ ಕಾಲೇಜು ಈ ಬಾರಿಯ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 96% ರಷ್ಟು ಫಲಿತಾಂಶ ಪಡೆದಿದೆ.

ಕಾಲೇಜಿನಲ್ಲಿ ಕಲಾ ವಿಭಾಗ(HESP), ವಾಣಿಜ್ಯ ವಿಭಾಗ(HEBA) ಹಾಗೂ ವಿಜ್ಞಾನ ವಿಭಾಗದಲ್ಲಿ (PCMB) ಕೋರ್ಸ್ ಗಳು ಲಭ್ಯವಿದೆ.ಕಾಲೇಜಿನಲ್ಲಿ ನುರಿತ ಮತ್ತು ದಕ್ಷ ಅನುಭವಿ ಉಪನ್ಯಾಸಕರುಗಳಿಂದ ಕಲಿಕೋಪರಕರಣಗಳ ಮೂಲಕ ವಿಶೇಷ ಭೋದನೆ ನೀಡಲಾಗುತ್ತದೆ.ಅದಲ್ಲದೇ ಕ್ರೀಡೆಯಲ್ಲಿ ಕೂಡ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.ಸರ್ಕಾರಿ ಸಂಸ್ಥೆಗೆ ದಾಖಲಾಗಿ,ಸರ್ಕಾರಿ ಸಂಸ್ಥೆಗಳನ್ನು ಉಳಿಸಲು ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅನೂಪ್ ಕುಮಾರ್ ಕರೆ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 8073888521 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.