ಸೋಮವಾರಪೇಟೆ: ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾಖಲಾತಿ ಪ್ರಾರಂಭ

ಸೋಮವಾರಪೇಟೆ: ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾಖಲಾತಿ ಪ್ರಾರಂಭ

ಸೋಮವಾರಪೇಟೆ:ಸೋಮವಾರಪೇಟೆ ಬಿ ಟಿ ಸಿ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025 - 26 ನೇ ಸಾಲಿನ ದಾಖಲಾತಿಗಳು ಈಗಾಗಲೇ ಪ್ರಾರಂಭಗೊಂಡಿದ್ದು ಅತ್ಯುತ್ತಮ ಸೌಲಭ್ಯಗಳು ಹಾಗೂ ನುರಿತ ಸಿಬ್ಬಂದಿ ವರ್ಗವನ್ನು ಹೊಂದಿರುವ ಕಾಲೇಜಿನಲ್ಲಿ ದಾಖಲಾತಿ ಪಡೆದುಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕಾಲೇಜು ಅಭಿವೃದ್ಧಿ ಸಮಿತಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಕ್ ವತಿಯಿಂದ "ಬಿ" ಗ್ರೇಡ್ ಮಾನ್ಯತೆ ಪಡೆದಿರುವ ಬಿ ಟಿ ಸಿ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ ಎ ( ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ), ಬಿ ಕಾಂ, ಬಿ ಸಿ ಎ ಕೋರ್ಸ್ ಗಳು ಲಭ್ಯವಿದೆ. ಸ್ಮಾರ್ಟ್ ಕ್ಲಾಸ್, ಸುಸಜ್ಜಿತ ಗ್ರಂಥಾಲಯ, ಸಿ ಸಿ ಕ್ಯಾಮೆರಾ ಕಣ್ಗಾವಲು, ಕ್ರೀಡೆ ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ಕೌಶಲ್ಯಾಧಾರಿತ ಶಿಕ್ಷಣ ವ್ಯವಸ್ಥೆ ಹೊಂದಿರುವ ಕಾಲೇಜಿನಲ್ಲಿ ದಾಖಲಾತಿ ಪಡೆದುಕೊಳ್ಳುವಂತೆ ಕಾಲೇಜು ಅಭಿವೃದ್ಧಿ ಸಮಿತಿ ತಿಳಿಸಿದೆ.