ಹಳ್ಳಿಗಟ್ಟು ಬೋಡ್ ನಮ್ಮೆ ಉತ್ಸವದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ಹಳ್ಳಿಗಟ್ಟು ಬೋಡ್ ನಮ್ಮೆ ಉತ್ಸವದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ಹಳ್ಳಿಗಟ್ಟು ಗ್ರಾಮದ ಭದ್ರಕಾಳಿ ದೇವಾಲಯದಲ್ಲಿ ಆಚರಿಸಲ್ಪಡುತ್ತಿರುವ, ಹಳ್ಳಿಗಟ್ಟು ಬೋಡ್ ನಮ್ಮೆ ಉತ್ಸವದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭಾಗವಹಿಸಿದರು.ಈ ಭಾಗದ ಜನರು ಶ್ರದ್ಧಾ ಭಕ್ತಿಯಿಂದ ಆಚರಿಸುವ ಈ ಉತ್ಸವಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಸ್ಥಳೀಯರೊಂದಿಗೆ ಬೆರೆತು ಉತ್ಸವದಲ್ಲಿ ಸಂತೋಷದಿಂದ ಪಾಲ್ಗೊಂಡರು. ಈ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದ ಸಾರ್ವಜನಿಕರೊಂದಿಗೆ ಮಾತನಾಡಿದ ಶಾಸಕರು ದೇವರ ಆಶೀರ್ವಾದ ನಾಡಿನ ಎಲ್ಲರ ಮೇಲೆ ಇರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್,ಹಿರಿಯ ಕಾಂಗ್ರೆಸ್ ಮುಖಂಡರಾದ ಮೂಕಳೇರ ಕುಶಾಲಪ್ಪ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.