ಹಾಲಗುಂದ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಕೋಟೆಯ ಅಭಿವೃದ್ಧಿ ಕಾಮಗಾರಿ: ಶಾಸಕ ಪೊನ್ನಣ್ಣ ಅವರ ಕಾಳಜಿಗೆ ಗ್ರಾಮಸ್ಥರ ಮೆಚ್ಚುಗೆ

ಹಾಲಗುಂದ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಕೋಟೆಯ ಅಭಿವೃದ್ಧಿ ಕಾಮಗಾರಿ: ಶಾಸಕ ಪೊನ್ನಣ್ಣ ಅವರ  ಕಾಳಜಿಗೆ ಗ್ರಾಮಸ್ಥರ ಮೆಚ್ಚುಗೆ

ಸಿದ್ದಾಪುರ :- ಚುನಾವಣೆಗೂ ಮುನ್ನ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭ ಜನರ ಸಮಸ್ಯೆಗಳನ್ನ ಬಗೆಹರಿಸುವ ಭರವಸೆ ನೀಡಿ ಇದೀಗ ನುಡಿದಂತೆ ನಡೆದುಕೊಂಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಒಂದು ಕೋಟಿ ಅನುದಾನಗಳನ್ನು ನೀಡುವುದರ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಗ್ರಾಮೀಣ ಪ್ರದೇಶವಾಗಿರುವ ಹಾಲುಗುಂದ ಪಂಚಾಯಿತಿ ವ್ಯಾಪ್ತಿಯ ಕೊಂಡಂಗೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ರಸ್ತೆ ಅಭಿವೃದ್ಧಿ, ಸೇತುವೆ, ತಡೆಗೋಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಇದೀಗ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು ಮತ್ತಷ್ಟು ಕಾಮಗಾರಿಗಳು ಸದ್ಯದಲ್ಲೇ ಪೂರ್ಣಗೊಳ್ಳಲಿದೆ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಾಸಕ ಪೊನ್ನಣ್ಣಅವರು ನುಡಿದಂತೆ ನಡೆದುಕೊಂಡು ಮಾದರಿಯಾಗಿದ್ದಾರೆ ಎಂದು ಹಾಲುಗುಂದ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರೆಹಮಾನ್ ಅಂದಾಯಿ ಪೊನ್ನಣ್ಣಅವರ ಅಭಿವೃದ್ಧಿ ಕಾಳಿಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಕೊಂಡಂಗೇರಿ ಸುನ್ನಿ ಮುಸ್ಲಿಂ ಜಮಾಆತ್ ಅಧ್ಯಕ್ಷ ಕುಪ್ಪಂದರ ಕೆ ಯೂಸುಫ್ ಹಾಜಿ ಮಾತನಾಡಿ ಹಲವು ವರ್ಷಗಳಿಂದಲೂ ಅಭಿವೃದ್ಧಿ ಕಾಣದೆ ರಸ್ತೆ ಸೇರಿದಂತೆ ಹಲವು ಸಮಸ್ಯೆಗಳು ಈ ಭಾಗದಲ್ಲಿತ್ತು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಹೆಚ್ಚು ಅನುದಾನಗಳನ್ನು ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿ ಮಾದರಿಯಾಗಿದ್ದಾರೆ ಎಂದು ಅಭಿನಂದಿಸಿದರು.

 ಮುಸ್ಲಿಂ ಜಮಾಆತ್ ಪ್ರದಾನ ಕಾರ್ಯದರ್ಶಿ ಪುಡಿಯಂಡ ಇ ಶಾದುಲಿ ಮಾತನಾಡಿ ಜಾತಿ ಮತ ಭೇದವಿಲ್ಲದೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಹೆಚ್ಚು ಅನುದಾನಗಳನ್ನು ನೀಡಿ ಅಭಿವೃದ್ಧಿಗೆ ಮುಂದಾಗಿದ್ದಾರೆ ಮತ್ತಷ್ಟು ಕಾಮಗಾರಿಗಳನ್ನ ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ಲಾ ,ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಜರಿದ್ದರು.