ಹೊಸ್ಕೇರಿ ಗ್ರಾ.ಪಂ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ:
ಮಡಿಕೇರಿ:ನೂತನವಾಗಿ ನಿರ್ಮಾಣ ಪ್ರಗತಿಯಲ್ಲಿರುವ ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ಕಟ್ಟಡವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರ ನಿರ್ದೇಶನದಂತೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಾದ ಎಚ್.ಎ ಹಂಸ ಕೊಟ್ಟಮುಡಿ ಹಾಗೂ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಕಟ್ಟಡ ಕಾಮಗಾರಿ ವೀಕ್ಷಿಸಿ, ನೂತನ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಶಾಸಕರ ಮೂಲಕ ಅಗತ್ಯ ಅನುದಾನ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎ ಅಬ್ದುಲ್ಲ ಇದ್ದರು.